Category: Kannada

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ವಿಫಲ: ಪಾಲಿಕೆಗೆ ಕೆಟ್ಟ ಹೆಸರು ಬರುತ್ತಿದೆ ಎಂದ ಹೈಕೋರ್ಟ್

ಬೆಂಗಳೂರು,ಜೂ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ನ್ಯಾಯಾಲಯದ ನಿರ್ದೇಶದನಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಚೀಫ್ ಎಂಜಿನಿಯರ್ ಎಂ.ಲೋಕೇಶ್ ಹೈಕೋರ್ಟ್ ಮುಂದೆ ಹಾಜರಾದರು. ಮೊನ್ನೆ ಮಂಗಳವಾರ ಹೈಕೋರ್ಟ್ ಚಾಟಿ ಬೀಸಿದ್ದ ಹಿನ್ನೆಲೆಯಲ್ಲಿ ಹಾಜರಾದ ಹಿರಿಯ ಅಧಿಕಾರಿಗಳು, ಪೈಥಾನ್ ಯಂತ್ರದ ಮೂಲಕ ಗುಂಡಿ ಮುಚ್ಚಲು ಕಾರ್ಯಾದೇಶ ನೀಡಿರುವ ಬಗ್ಗೆ

ಭಾರಿ ಮಳೆ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಲಾಕ್

ಮಂಗಳೂರು, ಜೂ.30: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಹೆದ್ದಾರಿಯಲ್ಲಿ ಕಿಲೋಮೀಟರ್ ನಷ್ಟು ವಾಹನ ದಟ್ಟಣೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ. ಮಕ್ಕಳು ಶಾಲೆಗೆ ತೆರಳಲು ಕಷ್ಟಕರವಾದ, ದುರ್ಗಮ ಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಈಗಾಗಲೇ ಶಾಲೆಗಳಿಗೆ ತೆರಳಿರುವ ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಉಳಿಸಿಕೊಳ್ಳುವಂತೆ ಹಾಗೂ ಮನೆಗೆ ವಾಪಾಸ್

ದಾವಣಗೆರೆ; ಬೋಧಕರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ, ಜೂನ್‌ 30; ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅರೆ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಯಲ್ಲಿ ಬೋಧಕೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ. ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಖಾಲಿ ಇರುವ ಒಂದು ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 20,000 ರೂ.

ಚಾಮರಾಜನಗರ; ಈ ಶಾಲೆಯಲ್ಲಿ ಪಾಠದ ಜೊತೆ ಬಿಲ್ಲು, ಕತ್ತಿವರಸೆ ತರಬೇತಿ!

ಚಾಮರಾಜನಗರ,ಜೂ30: ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಈ ಶಾಲೆ ಸೇರಿದ ಬಳಿಕ ಪಾಠದ ಜೊತೆ ಆರ್ಚರಿ, ಫೆನ್ಸಿಂಗ್‌ನಲ್ಲಿ ಪ್ರಾವೀಣ್ಯತೆ ಸಾಧಿಸುವ ಮೂಲಕ ಆಧುನಿಕ ಅರ್ಜುನರಾಗಿ ರೂಪುಗೊಳ್ಳುತ್ತಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ರಾಜ್ಯದ ಏಕೈಕ ಆರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾ ವಸತಿ ಶಾಲೆಯಲ್ಲಿ 45 ವಿದ್ಯಾರ್ಥಿಗಳಿದ್ದಾರೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ ‘ಅರ್ಜುನ ಶಕ್ತಿ’ ತೋರಿಸುತ್ತಿದ್ದಾರೆ. ಬಿಳಿಗಿರಿರಂಗನ ಬೆಟ್ಟದಲ್ಲಿ ಹುಂಡಿ ಎಣಿಕೆ:

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, ಶಿವಮೊಗ್ಗಕ್ಕೆ ಎನ್ಐಎ ಟೀಮ್

ಶಿವಮೊಗ್ಗ, ಜೂನ್ 30: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್ಐಎ) ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ವಿವಿಧ ರಾಜ್ಯದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ವಿವಿಧೆಡೆ ಪರಿಶೀಲನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಒಟ್ಟು 8 ವಾಹನಗಳಲ್ಲಿ 30 ರಾಷ್ಟ್ರೀಯ ತನಿಖಾ ದಳದ ಹಿರಿಯ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ