• Tue. Jan 31st, 2023

24×7 Live News

Apdin News

ಕರ್ನಾಟಕ ಹೈಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳ ಪ್ರಮಾಣವಚನ

Byadmin

Jan 25, 2023
ಬೆಂಗಳೂರು, ಜನವರಿ 25; ಕರ್ನಾಟಕ ಹೈಕೋರ್ಟ್‌ಗೆ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿರುವ ರಾಮಚಂದ್ರ ದತ್ತಾತ್ರೇಯ ಹುದ್ದಾರ್‌ ಹಾಗೂ ವೆಂಕಟೇಶ್‌ ನಾಯ್ಕ ತಾವರ್ಯನಾಯ್ಕ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಇಬ್ಬರು ನ್ಯಾಯಮೂರ್ತಿಗಳ ಸೇರ್ಪಡೆಯಿಂದಾಗಿ ನ್ಯಾಯಮೂರ್ತಿಗಳ ಸಂಖ್ಯೆ 51ಕ್ಕೆ ಏರಿಕೆಯಾಗಿದೆ.