• Wed. Sep 28th, 2022

24×7 Live News

Apdin News

ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಗೆ ಕ್ಲೀನ್ ಚಿಟ್ ಕೊಟ್ಟ ಜಾರಿ ನಿರ್ದೇಶನಾಲಯ

Byadmin

Sep 23, 2022




ಮುಂಬೈ, ಸೆಪ್ಟೆಟಂಬರ್ 23: ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದ ನಕಲಿ ಟೆಲಿವಿಷನ್ ರೇಟಿಂಗ್ ಪಾಯಿಂಟ್‌ (ಟಿಆರ್‌ಪಿ) ಹಗರಣದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್ ಟಿವಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಸುದ್ದಿ ವಾಹಿನಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಮುಂಬೈ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.