• Thu. Aug 11th, 2022

24×7 Live News

Apdin News

ನೂತನ ಉಪರಾಷ್ಟ್ರಪತಿಗೆ ಸಿಎಂ ಬೊಮ್ಮಾಯಿ ಅಭಿನಂದನೆ | Karnataka political leader Congratulate to the India’s new vice President jagdeep dhankhar

Byadmin

Aug 6, 2022


Karnataka

oi-Shankrappa Parangi

|

Google Oneindia Kannada News

ಬೆಂಗಳೂರು ಆಗಸ್ಟ್ 06: ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ) ಬೆಂಬಲಿತ ಜಗದೀಪ್ ಧನಕರ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಆದಿಯಾಗಿ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.

ಗಣರಾಜ್ಯ ದೇಶವಾದ ಭಾರತ ಎರಡನೇ ಉನ್ನತ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿರುವ ಜಗದೀಪ್ ಧನಕರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೃತ್ಪೂರ್ವಕ ಅಭಿನಂದನೆ ತಿಳಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಶಾಸಕಾಂಗದಲ್ಲಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ಅಪಾರ ಮತ್ತು ಶ್ರೀಮಂತ ಅನುಭವ ಹೊದಿರುವ ಜಗದೀಫ್ ಧನಕರ್ ಅವರ ಅನುಭವ ದೇಶದ ಪ್ರಜಾಸತ್ತಾತ್ಮಕ ಮನೋಭಾವಕ್ಕೆ ದೊಡ್ಡ ವರದಾನವಾಗಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಹ ನೂತನ ಉಪರಾಷ್ಟ್ರಪತಿಗಳಿಗೆ ಶುಭಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಉಪರಾಷ್ಟ್ರಪತಿಗಳಾಗಿ ಚುನಾಯಿತರಾದ ಜಗದೀಪ್ ಧನಕರ್ ಅವರಿಗೆ ಅಭಿನಂದನೆ ಎಂದು ಬರೆದುಕೊಂಡಿದ್ದಾರೆ.

ಅಶ್ವತ್ಥ ನಾರಾಯಣ, ತೇಜಸ್ವ ಸೂರ್ಯ ಅಭಿನಂದನೆ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಜಯಗಳಿಸಿದ ಜಗದೀಪ್ ಧನಕರ್ ಅವರಿಗೆ ಅಭಿನಂದನೆಗಳು. ಧನಕರ್ ಅವರು ಅಪಾರ ರಾಜಕೀಯ ಅನುಭವ ಹೊಂದಿದವರಾಗಿದ್ದು, ಅಷ್ಟೇ ಅಲ್ಲದೇ ಶೈಕ್ಷಣಿಕ ಹಿನ್ನೆಲೆಯನ್ನು ಹೊಂದಿದ್ದಾರೆ. ಉಪರಾಷ್ಟ್ರಪತಿ ಅಧಿಕಾರ ಸ್ವೀಕರಿಸದ ನಂತರ ಅವರು ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಮಹತ್ವ ಹೆಜ್ಜೆ ಗುರುತು ಹಾಕಲಿದ್ದಾರೆ ಎಂದು ಉನ್ನತ ಶಿಕ್ಷಣ ಮತ್ತು ಐಟಿ ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಶುಭಹಾರೈಸಿದ್ದಾರೆ.

ನೂತನ ಉಪರಾಷ್ಟ್ರಪತಿ ಆಯ್ಕೆ ಕುರಿತು ಅಭಿನಂದನೆ ಸಂಸದ ತೇಜಸ್ವಿ ಸೂರ್ಯ ಅವರು, ಜಗದೀಫ್ ಧನಕರ್ ಜಿ ಅವರ ಅಪಾರ ಅನುಭವ ಮತ್ತು ಸಾಂವಿಧಾನಿಕ ಕಾನೂನು ಹಾಗೂ ಅಭ್ಯಾಸದ ಜ್ಞಾನವು ಎಲ್ಲ ಭಾರತೀಯರಿಗೆ ಆಶೀರ್ವಾದವಾಗಲಿದೆ. ಉಪರಾಷ್ಟ್ರಪತಿಯಾಗಿ ಚುನಾಯಿತರಾಗಿರು ಅವರು ರಾಷ್ಟ್ರದ ಸೇವೆಯಲ್ಲಿ ಯಶಸ್ವಿ ಅಧಿಕಾರ ನೀಡುವಂತಾಗಲಿ ಎಂದು ಪ್ರಾರ್ಥಿಸುವುದಾಗಿ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

Karnataka political leader Congratulate to the Indias new vice President jagdeep dhankhar

ಇದೇ ಆಡಳಿತದಲ್ಲಿರುವ ಬಿಜೆಪಿ ನಾಯಕರು ಸೇರಿದಂತೆ ಅನೇಕ ಗಣ್ಯರು ನೂತನ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

English summary

Congratulations to the India’s new vice President jagdeep dhankhar by Karnataka political leader.

Story first published: Saturday, August 6, 2022, 21:30 [IST]