ಮಂಗಳೂರು, ಆಗಸ್ಟ್, 06: ಜಗತ್ತು ಸಾಕಷ್ಟು ಮುಂದುವರಿದಿದೆ. ನಾವೀಗ 21ನೇ ಶತಮಾನದಲ್ಲಿದ್ದೇವೆ. ಕರಾವಳಿಗರು ಸಾಕಷ್ಟು ಮುಂದುವರಿದಿದ್ದಾರೆ. ದೇಶ – ವಿದೇಶಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. ಆದರೆ ಆಚರಣೆ, ಆರಾಧನೆ ವಿಚಾರದಲ್ಲಿ ಇಂದಿಗೂ ತಮ್ಮ ಹಳೇ ಸಂಪ್ರದಾಯವನ್ನು ಶ್ರದ್ಧೆಯಿಂದ ಪಾಲಿಸಿಕೊಂಡು ಬರುತ್ತಿದ್ದಾರೆ. ತುಳುವರು ತಮ್ಮ ಹಿರಿಯರು ಆರಾಧಿಸಿಕೊಂಡು ಬಂದಿರುವ ಪಿತೃಗಳ ಆರಾಧನೆಯನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದಾರೆ. ಕುಲೆ ಆರಾಧನೆ