ಚಿಕ್ಕಬಳ್ಳಾಪುರ, ಜನವರಿ, 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಟ್ಟಿದಾಗಲೇ ಕಾಂಗ್ರೆಸ್ನಲ್ಲಿ ಇರಲಿಲ್ಲ. ಜನತಾ ದಳದಲ್ಲಿ ಇದ್ದು ಎಲ್ಲಾ ಬಗೆಯ ಅಧಿಕಾರ ಅನುಭವಿಸಿದ ಅವರು, ಅಧಿಕಾರದ ಆಸೆಗಾಗಿಯೇ ಕಾಂಗ್ರೆಸ್ಗೆ ಬಂದರು. ಇವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರದಲ್ಲಿ ಹೇಳಿದರು. ಸಿದ್ದರಾಮಯ್ಯನವರು ಒಂದೊಂದೇ ಕ್ಷೇತ್ರ ಹುಡುಕಾಡುತ್ತಿದ್ದಾರೆ.