ನವದೆಹಲಿ, ಜನವರಿ 25: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ, ಲಖಿಂಪುರ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಶೀಶ್ ಮಿಶ್ರಾ ಅವರು ಅಕ್ಟೋಬರ್ 3, 2021ರಂದು ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರನ್ನು ಕೊಂದ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಎದುರಿಸುತ್ತಿದ್ದಾರೆ.